ಗುರುವಾರ, ಮಾರ್ಚ್ 24, 2011

ಶಾಸನಸಭೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಮುಲಾಯಂ ಸಿಂಗ್ ಆಗ್ರಹ

ಎಲ್ಲಾ ರಾಜ್ಯಗಳ ವಿಧಾನ ಸಭೆಗಳಲ್ಲಿ ಮತ್ತು ಲೋಕ ಸಭೆಯಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಬೇಕೆಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಸಂಸತ್ತಿನಲ್ಲಿಂದು ಒತ್ತಾಯಿಸಿದರು.
ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಯಾದವ್, ಲೋಕ ಸಭೆಯಲ್ಲಿ ಮುಸ್ಲಿಂಮರ ಪ್ರಾತಿನಿಧ್ಯ ತೀರಾ ಕಡಿಮೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
14 ಪ್ರಮುಖ ರಾಜ್ಯಗಳಲ್ಲಿ ಮುಸ್ಲಿಮರು ಸಾಕಷ್ಟು ಪ್ರಭಾವ ಹೊಂದಿದ್ದರೂ ಲೋಕಸಭೆಯ 257 ಸದಸ್ಯರ ಪೈಕಿ ಕೇವಲ ಓರ್ವ ಮುಸ್ಲಿಂ ಸಮುದಾಯದ ಪ್ರತಿನಿಧಿ ಮಾತ್ರ ಜನರಿಂದ ಆಯ್ಕೆಯಾಗಿದ್ದಾರೆ. ಇಂತಹ ಪರಿಸ್ಥಿತಿಯನ್ನು ಹೋಗಲಾಡಿಸಲು ಅವರಿಗೆ ಮೀಸಲಾತಿ ಕಲ್ಪಿಸುವುದೊಂದೇ ಪರಿಹಾರ ಎಂದು ಮುಲಾಯಂ ಹೇಳಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ