ಮಂಗಳವಾರ, ಮೇ 03, 2011

ಮಂಗಳೂರು: ಎಸ್‌ಡಿಪಿಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ   (ಎಸ್‌ಡಿಪಿಐ) ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡ ಸದಸ್ಯತ್ವ ಅಭಿಯಾಕ್ಕೆ ನಗರದ ಪುರಭವನದಲ್ಲಿ ದಿನಾಂಕ 22-04-11ರಂದು ಶುಕ್ರವಾರ ಚಾಲನೆ ನೀಡಲಾಯಿತು.
ಈ ಸಂದರ್ಭ ದಿಕ್ಸೂಚಿ ಭಾಷಣ ಮಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅನ್ವರ್ ಸಾದಾತ್, ದೇಶದ ಪ್ರಮುಖ ರಾಜಕೀಯ ಪಕ್ಷಗಳು ವ್ಯಾಪರಿ ದೃಷ್ಟಿಕೋನ ಹೊಂದಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವ ಮುಕ್ತ ಮನಸ್ಸನ್ನು ಹೊಂದಿಲ್ಲ. ಬಡವರನ್ನು ಶೋಷಿಸುತ್ತಲೇ ಶ್ರೀಮಂತರಿಗೆ ಪೂರಕವಾದ ಕಾನೂನುಗಳನ್ನು ರೂಪಿಸುತಿವೆ. ಈ ನಿಟ್ಟಿನಲ್ಲಿ ಸಾಮಾಜಿಕ ಕಳಕಳಿ ಹೊಂದಿರುವ ಎಸ್‌ಡಿಪಿಐ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಮುಂದಾಗಿದೆ. ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಮಾತ್ರ ಮುಖ್ಯ ಉದ್ದೇಶವಲ್ಲ. ಅನ್ಯಾಯವನ್ನು ತಡೆಗಟ್ಟವುದರೊಂದಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಲು ಪಕ್ಷ ಬದ್ಧವಾಗಿದೆ ಎಂದರು.
ರಾಜ್ಯ ಉಪಾಧ್ಯಕ್ಷ ಅಬ್ದುಲ್ ಲತೀಫ್ ಪುತ್ತೂರು ಮಾತನಾಡಿ, ಎಸ್‌ಡಿಪಿಐ ದೇಶದಲ್ಲಿ ನಡೆಸುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು. ಪಕ್ಷವು ತಳಮಟ್ಟದಲ್ಲಿ ಸಂಘಟಿತವಾಗಿ ಬೆಳೆದುಬರುತ್ತಿದ್ದು, ಜನರು ಇದರತ್ತ ಆಕರ್ಷಿತರಾಗುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ)ದಲ್ಲಿ ಹಲವು ವರ್ಷಗಳ ಕಾಲ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡು ಪಕ್ಷದ ಕರ್ನಾಟಕ ರಾಜ್ಯ ಕಾರ್ಯದರ್ಶಿಯೂ ಆಗಿದ್ದ ಇಬ್ರಾಹೀಂ ಪೇಜಾವರ ಎಸ್‌ಡಿಪಿಐಗೆ ಸೇರ್ಪಡೆಗೊಂಡರು. ಪಕ್ಷದ ಧ್ವಜವನ್ನು ಅವರಿಗೆ ಹಸ್ತಾಂತರಿಸುವ ಮೂಲಕ ಅಬ್ದುಲ್ ಲತೀಫ್ ಪುತ್ತೂರು ಅವರನ್ನು ಬರಮಾಡಿಕೊಂಡರು.
ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ. ವಹಿಸಿದ್ದರು. ಪಕ್ಷದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಲತೀಫ್ ಪುತ್ತೂರು ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಪಕ್ಷದ ಪದಾಧಿಕಾರಿಗಳಾದ ನ್ಯಾಯವಾದಿ ಮಜೀದ್ ಖಾನ್, ಇಸ್ಮಾಯೀಲ್ ಎಂಜಿನಿಯರ್, ಮುಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದೀಕ್, ನವಾಝ್ ಉಳ್ಳಾಲ್, ಹಮೀದ್ ಸಾಲ್ಮರ, ಅಕ್ಬರ್ ಬೆಳ್ತಂಗಡಿ, ಅಕ್ರಂ ಹಸನ್ ಉಳ್ಳಾಲ ಮತ್ತಿತರಿದ್ದರು.
ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ಸ್ವಾಗತಿಸಿದರು. ಫಝ್‌ಲುದ್ದೀನ್ ಆತೂರು ವಂದಿಸಿದರು. ಸಲೀಂ ಗುರುವಾಯನಕೆರೆ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ