ಭಾನುವಾರ, ನವೆಂಬರ್ 28, 2010

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಹೇಳಿಕೆಗೆ ಖಂಡನೆ

ಮಂಗಳೂರು, ನ.28: ರಾಜ್ಯ ಅಲ್ಪಸಂಖ್ಯಾತರ ಆಯೋಗದ ನೂತನ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅಧಿಕಾರ ಸ್ವೀಕರಿಸಿದ ಬಳಿಕ ಕರೆದ ಪತ್ರಿಕಾಗೋಷ್ಠಿಯಲ್ಲಿ ‘ದೇಶದ ಬಹುಸಂಖ್ಯಾತರ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಆಯೋಗ ಕೆಲಸ ಮಾಡಲಿದೆ’ ಎಂಬ ಹೇಳಿಕೆಯು ಅಲ್ಪಸಂಖ್ಯಾತರನ್ನು ಆತಂಕಕ್ಕೀಡು ಮಾಡಿದೆ. ಇಂತಹ ಹೇಳಿಕೆಯು ಪಕ್ಷವೊಂದರ ಏಜೆಂಟ್‌ನ ಹೇಳಿಕೆಯಂತಾಗಿದೆ. ಇದನ್ನು ಮಂಗಳೂರು ಮಾಂಸ ವ್ಯಾಪಾರಸ್ಥರ ಸಂಘ ಖಂಡಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಲಿ ಹಸನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಂವಿಧಾನಿಕವಾಗಿ ಅಲ್ಪಸಂಖ್ಯಾತರಿಗೆ ರಕ್ಷಣೆ ಮತ್ತು ನ್ಯಾಯ ನೀಡುವುದು ಆಯೋಗದ ಉದ್ದೇಶವಾಗಿದೆ. ಅನ್ಯಾಯಕ್ಕೊಳಗಾದ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕಾದ ಅಧ್ಯಕ್ಷರು ಇಂತಹ ಬಾಲಿಶ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ