ಬಂಟ್ವಾಳ, ಡಿ.9: ಕ್ಯಾಂಡಲ್ ಸಂತು ಕೊಲೆ ಪ್ರಕರಣ ಸೇರಿದಂತೆ ಹದಿನೈದಕ್ಕೂ ಅಧಿಕ ಕ್ರಿಮಿನಲ್ ಚಟುವಟಿಕೆಗಳ ಆರೋಪದ ಮೇಲೆ ಮಂಗಳೂರು ಪೊಲೀಸರಿಂದ ಬೆಂಗಳೂರಿನಲ್ಲಿ ಬಂಧಿತನಾದ ಮಾಡೂರು ಯೂಸುಫ್ ನನ್ನು ಗುರುವಾರ ಸಂಜೆ ಬಂಟ್ವಾಳ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಆರೋಪಿ ಮಾಡೂರು ಯೂಸುಫ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.16ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಇಸುಬು ವಿರುದ್ದ ಎರಡು ಮೊಕದ್ದಮೆ ಗಳ ದಾಖಲಾಗಿವೆ. ಅಪರಾಧ ಪತ್ತೆದಳದ ಇನ್ಸ್‌ಪೆಕ್ಟರ್ ವೆಂಕಟೇಶ್ ಪ್ರಸನ್ನ, ಬಂಟ್ವಾಳ ವೃತ್ತ ನಿರೀಕ್ಷಕ ನಂಜುಂಡೇ ಗೌಡ ಮತ್ತು ಇತರ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ ಒದಗಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಬಳಿಕ ಆರೋಪಿಯನ್ನು ಬಂಟ್ವಾಳ ನಗರ ಠಾಣೆಗೆ ಕರೆತರಲಾಗಿದ್ದು, ಪುತ್ತೂರು ಎಎಸ್ಪಿ ಡಾ.ಅಮಿತ್ ಸಿಂಗ್ ವಿಚಾರಣೆಗೆ ಗುರಿಪಡಿಸಿದ್ದಾರೆ.
ತಪ್ಪು ಮಾಡಿಲ್ಲ.. ನನ್ನ ತಮ್ಮ ಯಾವ ತಪ್ಪನ್ನೂ ಮಾಡಿಲ್ಲ... ಪೇಪರ್‌ನವರೇ ಬರೆದು ದೊಡ್ಡದು ಮಾಡಿದ್ದಾರೆ... ಎಂದು ಮಾಡೂರು ಇಸುಬು ಸಹೋದರಿಯೊಬ್ಬರು ಪೊಲೀಸರಲ್ಲಿ ಭಿನ್ನವಿಸಿಕೊಳ್ಳುತ್ತಿದ್ದ ದೃಶ್ಯ ಬಂಟ್ವಾಳ ನ್ಯಾಯಾಧೀಶರ ನಿವಾಸದ ಮುಂದೆ ಕಂಡು ಬಂತು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ