ಶುಕ್ರವಾರ, ಡಿಸೆಂಬರ್ 03, 2010

ಕೆಐಎಡಿಬಿ ಹಗರಣ: ಸಚಿವ ಸ್ಥಾನಕ್ಕೆ ಕಟ್ಟಾ ರಾಜೀನಾಮೆ

ಶುಕ್ರವಾರ -
ಬೆಂಗಳೂರು, ಡಿ.3: ಭೂ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ವಸತಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸದ್ಯ ನಾಪತ್ತೆಯಾಗಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಲೋಕಾಯುಕ್ತ ಪೊಲೀಸರಿಂದ ಬಂಧನ ಬೀತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಕಟ್ಟಾ ಸುಬ್ರಹ್ಮಣ್ಯರ ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಆಗಿದ್ದು, ಅವರು ಮಾಧ್ಯಮಗಳ ಸಂಪರ್ಕಕ್ಕೆ ಸಿಗುತ್ತಿಲ್ಲ.
ಕೆಐಎಡಿಬಿ ಹಗರಣಕ್ಕೆ ಸಂಬಂಧಿಸಿ ಕಟ್ಟಾ ಸುಬ್ರಹ್ಮಣ್ಯರ ಪುತ್ರ ಕಟ್ಟಾ ಜಗದೀಶ್‌ರ ಮೇಲೂ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ತನ್ನ ಬಿಬಿಎಂಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಲ್ಲಿ ಭೂಹಗರಣಗಳಿಂದಲೇ ಸುದ್ದಿಯಾಗಿರುವ ರಾಜ್ಯ ರಾಜಕೀಯ ಇದೀಗ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಈ ಎಲ್ಲ ಬೆಳವಣಿಗೆಗಳಿಂದ ಯಡಿಯೂರಪ್ಪ ನೇತೃತ್ವದ ಸರಕಾರ ಮತ್ತೆ ಸಂಕಟಕ್ಕೆ ಸಿಲುಕಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ