ಚೆನ್ನೈ, ನ. 12: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೆಸ್ಸೆಸ್‌ನ ಮಾಜಿ ಮುಖ್ಯಸ್ಥ ಮಾಡಿರುವ ಆಪಾದನೆಗಳನ್ನು ವಿರೋಧಿಸಿ ಇಂದು ಮುಂಜಾನೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ, ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷ ಕೆ.ವಿ. ತಂಗಬಾಲು ಮತ್ತು ನೂರಾರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರತಿಭಟನಕಾರರು ರಸ್ತೆ ತಡೆ ಪ್ರತಿಭಟನೆಯಲ್ಲಿ ನಿರತರಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಬಂಧಿತರನ್ನು ಕೆಲ ಸಮಯದ ಬಳಿಕ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದರ್ಶನ್‌ರನ್ನು ಬಂಧಿಸಬೇಕು ಎಂದು ಆಗ್ರಹಿಸಿರುವ ತಂಗಬಾಲು, ತನ್ನ ಹೇಳಿಕೆಗಾಗಿ ಆರೆಸ್ಸೆಸ್ ನಾಯಕ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ