ಜಿಲ್ಲಾ ಹಾಗೂ ತಾ.ಪಂ. ಚುನಾವಣೆಗೆ ಡಿಸೆಂಬರ್ 31ರಂದು ನಡೆಯಲಿರುವ ಮತದಾನದ ವೇಳೆ ಭಾರತ ಚುನಾವಣಾ ಆಯೋಗವು ನೀಡಿರುವ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ಸೂಚಿಸಿರುವ 21 ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಮತ ಚಲಾಯಿಸಲು ಮತದಾರರು ತಮ್ಮ ಗುರುತನ್ನು ಸಾಬೀತು ಪಡಿಸಬೇಕು. ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ನೀಡಲಾಗಿರುವ 21 ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಯನ್ನು ಆ ಕುಟುಂಬದ ಇನ್ನಿತರ ಸದಸ್ಯರು ಗುರುತಿಗಾಗಿ ಬಳಸಬಹುದು.
1) ಪಾಸ್‌ಪೋರ್ಟ್, 2) ಡ್ರೈವಿಂಗ್ ಲೈಸನ್ಸ್, 3) ಆದಾಯ ತೆರಿಗೆ ಗುರುತಿನ ಚೀಟಿ, 4) ರಾಜ್ಯ, ಕೇಂದ್ರ ಸರಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, 5) ಸಾರ್ವಜನಿಕ ವಲಯದ ಬ್ಯಾಂಕ್, ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, 6) ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡಿರುವ ಗುರುತಿನ ಚೀಟಿ, 7) ಭಾವಚಿತ್ರವಿರುವ ನೋಂದಾಯಿತ ಡೀಡ್, ಪಟ್ಟಾ, ಮುಂತಾದ ಆಸ್ತಿ ದಾಖಲೆಗಳು, 8) ಭಾವಚಿತ್ರವಿರುವ ಪಡಿತರ ಚೀಟಿ (ರೇಷನ್ ಕಾರ್ಡ್), 9) ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಮಾಣ ಪತ್ರಗಳು, 10) ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶ, ಮಾಜಿ ಯೋಧರ ಪಿಂಚಣಿ ಪುಸ್ತಕ, ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ಧಾಪ್ಯ ವೇತನ ಆದೇಶ, ವಿಧವಾ ವೇತನ ಆದೇಶ, 11) ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿ, 12) ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಗಿ, 13) ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಅಂಗವಿಕಲರ ಗುರುತಿನ ಚೀಟಿ, 14) ಮಾಜಿ ಯೋಧರ ಭಾವಚಿತ್ರವಿರುವ ಸಿಎಸ್‌ಡಿ ಕ್ಯಾಂಟಿನ್ ಕಾರ್ಡ್, 15) ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, 16) ಎನ್‌ಆರ್‌ಇಜಿ ಯೋಜನೆಯ ಅಡಿಯಲ್ಲಿ ನೀಡಿರುವ ಭಾವಚಿತ್ರವಿರುವ ಉದ್ಯೋಗ ಕಾರ್ಡ್, 17) ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, 18) ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತ್ ಮುಂತಾದ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, 19) ಸರಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರಿಕರ ಗುರುತಿನ ಚೀಟಿ, 20) ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಿರುವ ಕುಟುಂಬದ ಸದಸ್ಯರ ಹೆಸರು, ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರ ಇರುವ ಮೂಲ ಪಡಿತರ ಚೀಟಿ, 21) ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್‌ಗಳು (ಕಾರ್ಮಿಕ ಮಂತ್ರಾಲಯ ಯೋಜನೆ). ಮೇಲ್ಕಂಡ ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ