ಸೋಮವಾರ, ಡಿಸೆಂಬರ್ 27, 2010

ಕರಾವಳಿಯಲ್ಲಿ ಉಗ್ರರ ದಾಳಿ ಭೀತಿ: ಮಂಗಳೂರು ನಗರ ಪೊಲೀಸ್ ಕಮಿಷನರ್ ನಿರಾಕರಣೆ

ಮಂಗಳೂರು, ಡಿ.27: ಜಲಮಾರ್ಗದ ಮೂಲಕ ಉಗ್ರರು ರಾಜ್ಯದೊಳಕ್ಕೆ ನುಸುಳುವ ಸಾಧ್ಯತೆಯ ಕುರಿತಂತೆ ಗುಪ್ತಚರ ಮಾಹಿತಿಗಳ ಹಿನ್ನೆಲೆಯಲ್ಲಿ ಕೇಂದ್ರವು ರಾಜ್ಯ ಸರಕಾರಕ್ಕೆ ಮುನ್ನೆ ಚ್ಚರಿಕೆಯ ಸಂದೇಶ ರವಾನಿಸಿದೆ ಎಂಬ ವದಂತಿ ಹಬ್ಬಿದೆ. ಆದರೆ ಈ ಕುರಿತು ಪತ್ರಿಕೆಯ ಜತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್‌ಕುಮಾರ್ ಸಿಂಗ್ ‘ಈವರೆಗೆ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ತನಗೆ ಯಾವುದೇ ಮಾಹಿತಿ ಬಂದಿಲ್ಲ. ಅದೊಂದು ವದಂತಿಯಾಗಿದ್ದು, ಜನತೆ ಆತಂಕ ಪಡಬೇಕಾಗಿಲ್ಲ ಎಂದರು. ಹಾಗಿದ್ದರೂ ಕಳೆದೊಂದು ವಾರದಿಂದ ಜಿಲ್ಲೆಯ ಕರಾವಳಿ ತೀರದಲ್ಲಿ ರಕ್ಷಣಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ’ ಎಂದಿದ್ದಾರೆ.
ಭಯೋತ್ಪಾದಕರು ರಾಜ್ಯದ ಪ್ರಮುಖ ನಗರಗಳನ್ನು ಗುರಿಯಾಗಿಸಿ ಕೊಂಡಿರುವ ಕುರಿತಂತೆ ಗುಪ್ತಚರ ಮಾಹಿತಿಯನ್ನು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ರವಾನಿಸಿದೆ ಎನ್ನ ಲಾಗಿದೆ. ಮಂಗಳೂರು ಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗೆ ಒತ್ತು ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಭದ್ರತಾ ಪಡೆ, ಸ್ಥಳೀಯ ಪೊಲೀಸ್ ತಂಡ, ಕರಾವಳಿ ತಟ ರಕ್ಷಣಾ ಪಡೆ ಸೇರಿದಂತೆ ಸಂಬಂಧ ಪಟ್ಟ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದೆ.
ನವ ಮಂಗಳೂರು ಬಂದರು ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಗಳನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯು ಉಗ್ರರ ಸಂಭವನೀಯ ದಾಳಿಯ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ಪರಿಗಣಿಸ ಲ್ಪಟ್ಟಿವೆ. ಹಳೆ ಬಂದರು ಬಳಿ ಹಡಗಿ ನಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಾಗಿ ಸಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಕರಾವಳಿ ತಟ ರಕ್ಷಣಾ ಪಡೆಯ ಸಿಬ್ಬಂದಿ ಸಹಕಾರದಲ್ಲಿ ತಪಾಸಣೆ ನಡೆ ಸಲಾಗಿತ್ತು. ಆದರೆ ಅಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿರಲಿಲ್ಲ.
ಜ.2ರಂದು ಮಂಗಳೂರಿನಲ್ಲಿ ನಡೆಯಲಿರುವ ಹಿಂದೂ ಸಮಾ ಜೋತ್ಸವಕ್ಕೆ ಆರೆಸ್ಸೆಸ್ ಹಿರಿಯ ನಾಯಕರಾದ ಪ್ರವೀಣ್ ತೊಗಾಡಿಯಾರಂತಹ ಉಗ್ರರ ಹಿಟ್ ಲಿಸ್ಟ್‌ನಲ್ಲಿರುವ ನಾಯಕರು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲೂ ನಗರಾದ್ಯಂತ ಭದ್ರತೆ ಬಿಗಿಗೊಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ