ಬುಧವಾರ, ಡಿಸೆಂಬರ್ 29, 2010

ನಾಳೆ ಚುನಾವಣೆ: ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು, ಡಿ. 29: ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ನ ಎರಡನೆ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಬೆಳಗ್ಗೆ ತೆರೆಬಿದ್ದಿದ್ದು, ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ನಡೆಸಿದರು.
ಡಿ.31ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ 17 ಜಿಲ್ಲೆಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸಾವಿರಾರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ರಾಜಕೀಯ ನಾಯಕರು ಕ್ಷೇತ್ರ ಬಿಟ್ಟು ತೆರಳುವಂತೆ ಚುನಾವಣಾ ಆಯೋಗ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಪಾದಯಾತ್ರೆಯ ಮೂಲಕ ಮತಯಾಚಿಸುತ್ತಿದ್ದ ದೃಶ್ಯಗಳು ಕಂಡು ಬಂದವು.
ಶುಕ್ರವಾರ ನಡೆಯಲಿರುವ ಮತದಾನವು ಮುಕ್ತ ಹಾಗೂ ಶಾಂತಿಯಿಂದ ನಡೆಯಲು ಬೇಕಾದ ಎಲ್ಲ ಸಕಲ ಸಿದ್ಧತೆಗಳನ್ನು ಚುನಾವಣಾ ಆಯೋಗ ಈಗಾಗಲೇ ನಡೆಸಿದೆ. ಜ.4ರಂದು ಎಲ್ಲ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ