ಗುರುವಾರ, ಡಿಸೆಂಬರ್ 30, 2010

ಬಿಜೆಪಿ ರಾಷ್ಟ್ರೀಯ ನಾಯಕರು ದಿಢೀರ್ ರಾಜ್ಯಕ್ಕೆ

ಬೆಂಗಳೂರು: ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ಹೋರಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭ್ರಷ್ಟಾಚಾರ ಭೂ ಹಗರಣಗಳೇ ಅಡ್ಡಿಯಾಗಿರುವ ಹಿನ್ನೆಲೆಯಲ್ಲೇ ಬಿಜೆಪಿಯ ರಾಷ್ಟ್ರೀಯ ನಾಯಕರಾದ ಅರುಣ್ ಜೇಟ್ಲಿ ಹಾಗೂ ಧರ್ಮೇಂದ್ರ ಪ್ರಧಾನ್ ರಾಜ್ಯಕ್ಕೆ ದಿಢೀರ್ ಆಗಮಿಸಿದ್ದಾರೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಅಂತಿಮ ಘಟ್ಟಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಾಯಕರ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದಲ್ಲಿ ತಮಗಾಗುತ್ತಿರುವ ಅಪಮಾನ ವನ್ನು ತಪ್ಪಿಸಲು ಯಡಿಯೂರಪ್ಪ ಅವರನ್ನು ಮನವೊಲಿಸಿ ಕೆಳಗಿಳಿಸುವುದೇ ಇಲ್ಲವೇ ಹಗರಣಗಳಿಂದ ಪಕ್ಷಕ್ಕೆ ಉಂಟಾಗಿರುವ ಹಾನಿ ತಪ್ಪಿಸಿ ಸಂಘಟಿಸಲೇ ಎಂಬ ಮಾತು ಕೇಳಿ ಬರುತ್ತಿವೆ. ಕೆಲವೇ ವಾರಗಳ ಹಿಂದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಮುಂದಾಗಿದ್ದ ಬಿಜೆಪಿ ವರಿಷ್ಟರು ಇದೀಗ ಅರುಣ್ ಜೇಟ್ಲಿ ಹಾಗೂ ರಾಜ್ಯದಲ್ಲಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿದ್ದು ಈ ನಾಯಕರು ಪಕ್ಷದ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ