ಕಾಸರಗೋಡು, ಡಿ.16: ಹಿರಿಯ ಪತ್ರಕರ್ತ ಕೆ.ಎಂ.ಅಹ್ಮದ್ (64) ಇಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಇವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ‘ಮಾತೃಭೂಮಿ’ ಮಲಯಾಳ ದೈನಿಕದ ಬ್ಯೂರೋ ಚೀಫ್ ಆಗಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು, ಪ್ರಸ್ತುತ ‘ಉತ್ತರದೇಶಂ’ ಸಂಜೆ ದೈನಿಕದ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾಧ್ಯಮ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದ ಇವರು, ದೇಶಿಯ ವೇದಿಕೆಯ ಜಿಲ್ಲಾಧ್ಯಕ್ಷರಾಗಿದ್ದರು. ಕಾಸರಗೋಡು ಪ್ರೆಸ್‌ಕ್ಲಬ್ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಪಾರ್ಥಿವ ಶರೀರವನ್ನು ಇಂದು ಸಂಜೆ ಸಾರ್ವಜನಿಕ ದರ್ಶನಕ್ಕಾಗಿ ಪ್ರೆಸ್‌ಕ್ಲಬ್‌ನಲ್ಲಿ ಇಡಲಾಗಿದೆ .
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ