ಬೆಂಗಳೂರು, ಡಿ. 5: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ (ಎಸ್‌ಐಓ)ದ 2011-12ನೆ ಅವಧಿಗೆ ಕರ್ನಾ ಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಅಶ್ಫಾಖ್ ಅಹ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.
ಜಮಾಅತೆ ಇಸ್ಲಾಮಿ ಹಿಂದ್‌ನ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ಲಾ ಜಾವೇದ್ ಮೇಲು ಸ್ತುವಾರಿಯಲ್ಲಿ ನಗರದಲ್ಲಿ ಇಂದು ನಡೆದ ಎಸ್‌ಐಓ ರಾಜ್ಯ ಸಲಹಾ ಮಂಡಳಿ ಸಭೆಯಲ್ಲಿ ಅಶ್ಫಾಖ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಅಶ್ಫಾಖ್ ಅಹ್ಮದ್ ಶರೀಫ್ ಪತ್ರಿಕೋದ್ಯಮ ಪದವಿಧರರಾಗಿದ್ದಾರೆ. ಈ ಹಿಂದೆ ರಾಜ್ಯ ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ, ಕರಾವಳಿ ವಲಯದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದಾರೆ.
ಮುಂದಿನ ಜನವರಿ ಮೊದಲ ವಾರದಲ್ಲಿ ನಿರ್ಗಮಿತ ರಾಜ್ಯಾಧ್ಯಕ್ಷ ಶೌಕತ್ ಅಲಿ ಅವರು ನೂತನ ಅಧ್ಯಕ್ಷರಿಗೆ ಹೊಣೆಗಾರಿಕೆ ಹಸ್ತಾಂತರ ಮಾಡಲಿದ್ದಾರೆ ಎಂದು ಸಂಘಟನೆಯ ಸಾರ್ವ ಜನಿಕ ಸಂಪರ್ಕ ಕಾರ್ಯದರ್ಶಿ ಸೈಯದ್ ಇಶ್ತಿಯಾಖ್ ಹಸನ್ ತಿಳಿಸಿದ್ದಾರೆ.
ಕಾರ್ಯದರ್ಶಿಯಾಗಿ ಡಾ. ಶಾಕಿರ್: ಇದೇ ಸಂದರ್ಭದಲ್ಲಿ ಮುಂದಿನ ಅವಧಿಗೆ ರಾಜ್ಯ ಕಾರ್ಯದರ್ಶಿಯಾಗಿ ಡಾ. ಶಾಕೀರ್ ಅಲಿ ಅವರನ್ನು ಆಯ್ಕೆ ಮಾಡಲಾಗಿದೆ. ಮೂಲತಃ ಗುಲ್ಬರ್ಗದವರಾದ ಡಾ. ಶಾಕಿರ್, ಎಂಬಿಬಿಎಸ್ ಪದವಿಧರರಾಗಿದ್ದಾರೆ.
ಕಳೆದ ಎರಡು ಅವಧಿಗಳಲ್ಲಿ ಅವರು ರಾಜ್ಯ ಸಲಹಾ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಸಂಘಟನೆಯ ಪ್ರಕಟಣೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ