ಅಬುಧಾಬಿಯ ‘ಬ್ಯಾರೀಸ್ ವೆಲ್ಫೇರ್ ಫೋರಂ’ನ ಸಾರಥ್ಯ: ನಾಳೆ ಮಂಗಳೂರಿನಲ್ಲಿ 15 ಜೋಡಿಗಳ ಸಾಮೂಹಿಕ ವಿವಾಹ
ಮಂಗಳೂರು, ಜ.11: ಸಮುದಾಯದ ಅನಾಥ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಹೆಣ್ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಬುಧಾಬಿಯ ‘ಬ್ಯಾರೀಸ್ ವೆಲ್ಫೇರ್ ಫೋರಂ’ 2008ರಿಂದ ಹಮ್ಮಿಕೊಂಡು ಬಂದಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಮೂರನೆ ಸಮಾರಂಭವು 2011ರ ಜ.13ರಂದು ನಗರದ ಮಿಲಾಗ್ರಿಸ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಂದರ್ಭ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಆಯ್ದ 15 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂದು ಅಬುಧಾಬಿಯ ಬಿಡಬ್ಲುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ತಿಳಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಬೆಳಗ್ಗೆ 10 ಗಂಟೆಗೆ ಸಮಾರಂಭ ಜರಗಲಿದ್ದು, ಮಂಗಳೂರು ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಸಾಮೂಹಿಕ ವಿವಾಹದ ನಿಖಾಹ್‌ನ ನೇತೃತ್ವ ವಹಿಸಲಿದ್ದಾರೆ. ಉಡುಪಿ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಎಸ್ಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್, ಕರ್ನಾಟಕ ಎನ್‌ಆರ್‌ಐ ಫೋರಂನ ಉಪಾಧ್ಯಕ್ಷ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹೀಂ, ಶಾಸಕ ಯು.ಟಿ. ಖಾದರ್ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಣ್ಣೂರು ಮತ್ತು ಕ್ಯಾಲಿಕಟ್ ವಿಶ್ವವಿದ್ಯಾನಿಲಯ ಗಳ ವಿಶ್ರಾಂತ ಉಪಕುಲಪತಿ ಪ್ರೊ. ಎಂ. ಅಬ್ದುರ್ರಹ್ಮಾನ್, ಯುನಿಟಿ ಅಕಾಡಮಿ ಆಫ್ ಎಜುಕೇಶನ್‌ನ ಅಧ್ಯಕ್ಷ ಡಾ. ಸಿ.ಪಿ. ಹಬೀಬುರ್ರಹ್ಮಾನ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಎಂ.ಬಿ. ಅಬ್ದುರ್ರಹ್ಮಾನ್, ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮೊಯ್ದಿನ್ ಬಾವಾ, ಬೆಂಗಳೂರು ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಜಿ.ಎ.ಬಾವಾ, ಝಕರಿಯಾ ಫೌಂಡೇಶನ್‌ನ ಅಧ್ಯಕ್ಷ ಬಿ. ಝಕರಿಯಾ ಜೋಕಟ್ಟೆ, ಕೃಷ್ಣಾಪುರ ಅಲ್ ಬದ್ರಿಯಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಂ. ಮುಮ್ತಾಝ್ ಅಲಿ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಅಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ ಸಮಾರಂಭದಲ್ಲಿ ಉಪಸ್ಥಿತರಿ ರುವರು ಎಂದು ಅವರು ಮಾಹಿತಿ ನೀಡಿದರು. ಸನ್ಮಾನ: ಇದೇ ವೇಳೆ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಮಾಜಿ ಸಚಿವ ಬಿ.ಎ. ಮೊಯ್ದಿನ್ ಮತ್ತು ತುಂಬೆಯ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಬಿ.ಅಹ್ಮದ್ ಹಾಜಿ ಮುಹಿಯ್ಯುದ್ದೀನ್‌ರನ್ನು ಸನ್ಮಾನಿಸ ಲಾಗುತ್ತದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ಇದರ ಸಂಯೋಜಕ ಮುಹಮ್ಮದ್ ರಫೀಕ್ ಕೃಷ್ಣಾಪುರ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಎಂ.ಬಿ. ಅಬ್ದುರ್ರಹ್ಮಾನ್, ಬಿಡಬ್ಲುಎಫ್ ಸಾಮೂಹಿಕ ವಿವಾಹ ವ್ಯವಸ್ಥಾಪಕ ಸಮಿತಿಯ ಸಂಚಾಲಕ ಉಮರ್ ಯು.ಎಚ್. ಉಪಸ್ಥಿತರಿದ್ದರು.
‘‘ಕರ್ನಾಟಕ ಕರಾವಳಿಯ ಅನಿವಾಸಿ ಭಾರತೀಯ ಬ್ಯಾರಿಗಳ ಒಕ್ಕೂಟವಾದ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ ಸಮಾಜ ಸೇವೆ, ಶಿಕ್ಷಣಕ್ಕೆ ಪ್ರೋತ್ಸಾಹ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಹಿತ ಇನ್ನಿತರ ಅನೇಕ ಕಾರ್ಯಕ್ರಮಗಳನ್ನು ಕಳೆದ 8 ವರ್ಷಗಳಿಂದ ನಡೆಸುತ್ತಾ ಬಂದಿದೆ. 2008ರಿಂದ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈವರೆಗೆ 28 ಜೋಡಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಜ.13ರಂದು 15 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾ ರ್ಪಣೆ ಮಾಡಲಿದ್ದಾರೆ. ಪ್ರತಿ ಜೋಡಿಗೆ 1.25 ಲಕ್ಷ ರೂಪಾಯಿಯನ್ನು ಭರಿಸಲಾ ಗುತ್ತದೆ’’ಎಂದು ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ