ಬೆಂಗಳೂರು, ಫೆ. 10: ಕಳೆದ 2008ರಲ್ಲಿ ಮೈಸೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದ 165 ಕಾರ್ಯಕರ್ತರನ್ನು ಕಾನೂನು ಬಾಹಿರವಾಗಿ ಬಂಧಿಸಿದುದಕ್ಕೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ 50 ಸಾವಿರ ರೂ. ದಂಡ ವಿಧಿಸಿದೆ.
ಅಕ್ರಮ ಬಂಧನಕ್ಕೆ ಪರಿಹಾರವಾಗಿ ತಲಾ 10 ಲಕ್ಷ ರೂ. ನೀಡಬೇಕು ಎಂದು ವಸೀಂ ಅಹ್ಮದ್ ಹಾಗೂ 164 ಮಂದಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ಎಸ್.ಪಾಟೀಲ್, ಪರಿಹಾರದ ಬೇಡಿಕೆಯನ್ನು ತಿರಸ್ಕರಿಸಿ, ನಿಯಮ ಉಲ್ಲಂಘಿಸಿ ಪಿಎಫ್‌ಐ ಕಾರ್ಯಕರ್ತನ್ನು ಬಂಧಿಸಿದ್ದಕ್ಕೆ ಸರಕಾರಕ್ಕೆ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತನಿಖೆ ನಡೆಸಿ ಅಮಾಯಕರನ್ನು ಕಾನೂನು ಬಾಹಿರವಾಗಿ ಬಂಧಿಸಿದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳನ್ನು ಪತ್ತೆ ಹಚ್ಚಿ ದಂಡದ ಮೊತ್ತವನ್ನು ಅವರಿಂದ ವಸೂಲಿ ಮಾಡಬೇಕು ಎಂದು ನ್ಯಾಯಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.
ಕಾನೂನುಬದ್ಧ ಪ್ರತಿಭಟನೆ ನಡೆಸುತ್ತಿರುವಾಗ ಪೊಲೀಸರು ತಮ್ಮನ್ನು ಅಕ್ರಮವಾಗಿ ಬಂಧಿಸಿ ಬೆಳಗಾವಿ ಜೈಲಿನಲ್ಲಿಟ್ಟಿದ್ದರು. ಈ ವಿಚಾರದಲ್ಲಿ ಜಿಲ್ಲಾಡಳಿತ ನಮ್ಮಿಂದಿಗೆ ಪಕ್ಷಪಾತದಿಂದ ನಡೆದುಕೊಂಡಿದೆ. ಅಮಾಯಕರನ್ನು ಅಕ್ರಮ ಬಂಧಿನದಲ್ಲಿಟ್ಟಿದ್ದರಿಂದ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ತಮಗೆ ಆದಂತಹ ನಷ್ಟಕ್ಕೆ ಪರಿಹಾರವಾಗಿ ತಲಾ 10 ಲಕ್ಷ ರೂ. ನೀಡಬೇಕು ಎಂದು 165 ಪಿಎಫ್‌ಐ ಕಾರ್ಯಕರ್ತರು ಅರ್ಜಿ ಸಲ್ಲಿಸಿದ್ದರು.
ನಿಷೇಧಾಜ್ಞೆ ಜಾರಿಯಲ್ಲಿರುವಾಗ ಪಿಎಫ್‌ಐ ಕಾರ್ಯಕರ್ತರು ಕಾನೂನಿಗೆ ವಿರುದ್ಧವಾಗಿ ಸಭೆ ಸೇರಿದ್ದರು. ನಿಷೇಧಾಜ್ಞೆ ಉಲ್ಲಂಘಿಸಿದ ಕಾರಣಕ್ಕಾಗಿ ಪ್ರತಿಭಟನಕಾರರನ್ನು ಬಂಧಿಸಲಾಗಿತ್ತು ಎಂದು ಪೊಲೀಸರ ವಾದವಾಗಿತ್ತು. ಪ್ರಕರಣದ ಹಿನ್ನಲೆ: ಜಿಲ್ಲಾಡಳಿತ ಪಕ್ಷಪಾತಿ ಧೋರಣೆ ಮತ್ತು ದೌರ್ಜನ್ಯದ ವಿರುದ್ಧ ಜುಲೈ.9, 2008ಕ್ಕೆ ಪಿಎಫ್‌ಐ ಮೈಸೂರಿನಲ್ಲಿ ಜೈಲ್ ಭರೋ ಕಾರ್ಯಕ್ರಮಕ್ಕೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದರು.
ಈ ಸಂಬಂಧ ಸಲ್ಲಿಸಲಾಗಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಮಂಜುಳಾ ಚೆಲ್ಲೂರು ಹಾಗೂ ನ್ಯಾ. ಜವಾದ್ ರಹೀಂ ಅವರಿದ್ದ ವಭಾಗೀಯ ಪೀಠ, ಪೊಲೀಸರನ್ನು ತೀವ್ರ ತರಾಟೆಗೆ ತೆಗೆದಕೊಂಡು, ಬಂಧಿತರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆದೇಶ ನೀಡಿದ್ದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ