ಗುರುವಾರ, ಫೆಬ್ರವರಿ 24, 2011

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪಾವೂರು ಗ್ರಾಮ ಪಂಚಾಯತ್ ಲೋಕಾಯುಕ್ತ ಭೇಟಿ

ಮಂಗಳೂರು: ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪಾವೂರು ಗ್ರಾಮ ಪಂಚಾಯತ್‌ಗೆ ಲೋಕಾಯುಕ್ತರು ಭೇಟಿ ನೀಡಿ ಅಹವಾಲು ಸ್ವೀಕರಿಸಿದ ಬಳಿಕ ಕಾಮಗಾರಿ ಪರೀಶೀಲನೆ ನಡೆಸಿದ್ದು ಅದೇ ವೇಳೆ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ನಿನ್ನೆ ನಡೆದಿದೆ. ಘಟನೆಯಿಂದ ಗಾಯಗೊಂಡ ಮೂವರು ಎಸ್‌ಡಿಪಿಐ ಕಾರ್ಯಕರ್ತರು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಪಾವೂರು ಪಂಚಾಯತ್‌ಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕಡತಗಳನ್ನು ಪರಿಶೀಲಿಸಿದ್ದರು. ಈ ಸಂದರ್ಭ ಆಶ್ರಯ ಯೋಜನೆಯ ಫೊಟೋಗಳು ಸರಿಯಾಗಿಲ್ಲ ಎಂದು ಲೋಕಾಯುಕ್ತರು ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೇ ವೇಳೆ ಎಸ್‌ಡಿಪಿಐ ಕಾರ್ಯ ಕರ್ತರು ಕೆಲವೊಂದು ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ತಕರಾರು ಎತ್ತಿದ್ದರು. ಮಲಾರ್ ಅಕ್ಷರನಗರದಿಂದ ಕೆಳಗಿನ ಮಾರ್ಗದವರೆಗಿನ ರಸ್ತೆ ಮತ್ತು ತಡೆಗೋಡೆ ಕಾಮಗಾರಿ ಆಗದೆ ಬಿಲ್ ಪಾವತಿಸಲಾಗಿದೆ ಎಂದು ತಕರಾರು ಎತ್ತಿದ್ದರು.
ಅವರ ತಕರಾರನ್ನು ಸ್ವೀಕರಿದ ಲೋಕಾಯುಕ್ತ ಅಧಿಕಾರಿ ಗಳು ತಾಲೂಕು ಪಂಚಾಯತ್ ಸದಸ್ಯರು, ಗ್ರಾಮ ಪಂಚಾ ಯತ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ವಾಪಸ್ ಹೋಗುವ ವೇಳೆ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸಿದ್ದಾರೆ. ಘಟನೆಯಿಂದಾಗಿ ಗಾಯಗೊಂಡ ಎಸ್‌ಡಿಪಿಐ ಕಾರ್ಯಕರ್ತರಾದ ಇಕ್ಬಾಲ್, ಬಶೀರ್ ಮತ್ತು ಅಬೂಬಕ್ಕರ್ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ