ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಘಟಕವು ಫೆ.27ರಂದು ಮಂಗಳೂರಿನಲ್ಲಿ ರಾಜ್ಯ ವಿದ್ಯಾರ್ಥಿ ಸಮಾವೇಶ ಆಯೋಜಿಸಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಬಳಿಕ 10 ಗಂಟೆಗೆ ನಗರದ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಭಾರತ ಎತ್ತ ಸಾಗುತ್ತಿದೆ?’ ಎಂಬ ವಿಷಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ಅಂಕಣಕಾರ ಶಿವಸುಂದರ್, ಮಂಗಳೂರು ವಿವಿ ಕಾಲೇಜು ಉಪನ್ಯಾಸಕ ಪಟ್ಟಾಭಿರಾಮ ಸೋಮಯಾಜಿ ಬೆಂಗಳೂರು ವಿಜಯಾ ಕಾಲೇಜಿನ ಡಾ.ಶ್ರೀಧರ್, ಮಂಗಳೂರು ವಿವಿ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಉದಯ ಬಾರಕೂರು ವಿಚಾರ ಮಂಡಿಸಲಿದ್ದಾರೆ.
ಅಪರಾಹ್ಣ 3 ಗಂಟೆಗೆ ಜ್ಯೋತಿ ವೃತ್ತದಿಂದ ನೆಹರೂ ಮೈದಾನದವರೆಗೆ ವಿದ್ಯಾರ್ಥಿ ರ್ಯಾಲಿ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಬೈಕ್ ರ್ಯಾಲಿಗಳನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಗೆ ನೆಹರೂ ಮೈದಾನದಲ್ಲಿ ‘ಕಾಲೇಜು ಸೀಟು ಲಕ್ಷ ನೋಟು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಸಂಜೆ 4:30ಕ್ಕೆ ‘ಸಾಮಾಜಿಕ ಬದಲಾವಣೆಗಾಗಿ ವಿದ್ಯಾರ್ಥಿಗಳು’ ಎಂಬ ಘೋಷ ವಾಕ್ಯದಡಿ ಸಾರ್ವಜನಿಕ ಸಮಾವೇಶ ನಡೆಯಲಿದೆ.
ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಲಂಕೇಶ್ ಪತ್ರಿಕೆಯ ಪ್ರಧಾನ ಸಂಪಾದಕಿ ಗೌರಿ ಲಂಕೇಶ್, ವಾರ್ತಾ ಭಾರತಿಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ, ಉಪನ್ಯಾಸಕ ಪಟ್ಟಾಭಿರಾಮ ಸೋಮಯಾಜಿ, ತೇಜಸ್ ದೈನಿಕದ ಪ್ರಧಾನ ಸಂಪಾದಕ ಪ್ರೊ.ಪಿ. ಕೋಯ, ಸಾಮಾಜಿಕ ಕಾರ್ಯಕರ್ತ ಶಿವಸುಂದರ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶರೀಫ್, ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಸಲಹಾ ಸಮಿತಿಯ ಅಧ್ಯಕ್ಷ ಅನೀಸ್ ಅಹ್ಮದ್, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜೀದ್ ಕೊಡ್ಲಿಪೇಟೆ, ನ್ಯಾಶನಲ್ ವುಮನ್ಸ್ ಫ್ರಂಟ್‌ನ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್, ಕ್ಯಾಂಪ್ ಫ್ರಂಟ್ ತಮಿಳುನಾಡು ರಾಜ್ಯಾಧ್ಯಕ್ಷ ಹಸನ್ ಫಾರೂಕ್, ಕೇರಳ ರಾಜ್ಯಾಧ್ಯಕ್ಷ ಅಜ್ಮಲ್ ಇಸ್ಮಾಯೀಲ್ ಉಪಸ್ಥಿತರಿರುವರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಖಾನ್, ವಿದ್ಯಾರ್ಥಿ ಸಮಾ ವೇಶದ ಸಂಚಲನಾ ಸಮಿತಿಯ ಅಧ್ಯಕ್ಷ ಅಬ್ದುರ್ರಹ್ಮಾನ್, ಸಂಘಟನೆಯ ರಾಜ್ಯ ಕಾರ್ಯದರ್ಶಿ ತುಫೈಲ್ ಅಹ್ಮದ್, ಸಂಚಲನಾ ಸಮಿತಿಯ ಪ್ರಧಾನ ಸಂಚಾಲಕ ನಾಸಿರ್ ಹಸನ್ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ